"ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅತಿಥಿ"

("2024ನೇ ಸಾಲಿನ ಬಾಲ ಪುರಸ್ಕಾರ ಪ್ರಶಸ್ತಿ ಪಡೆದ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದಿಲ್ಲಿಯಲ್ಲಿ ಸಂವಾದ ನಡೆಸಿದರು. ಕರ್ನಾಟಕದ ಚೆಸ್ ಮಾಸ್ಟರ್ ಚಾರ್ವಿ ಅನಿಲ್ ಕುಮಾರ್ ಸೇರಿದಂತೆ 19 ಮಕ್ಕಳು ಪ್ರಶಸ್ತಿಗೆ ಭಾಜನರಾಗಿದ್ದು, ಸೋಮವಾರ ರಾಷ್ಟ್ರಪತಿ ದ್ರಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದರು. ಕಲೆ ಮತ್ತು ಸಂಸ್ಕೃತಿ, ಶೌರ್ಯ, ವಿಜ್ಞಾನ - ತಂತ್ರಜ್ಞಾನ, ಸಾಮಾಜಿಕ ಸೇವೆ, ಕ್ರೀಡೆ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ 5 ರಿಂದ 18 ವರ್ಷದೊಳಗಿನ ಮಕ್ಕಳ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.")

ಹೊಸದಿಲ್ಲಿ: ದೇಶದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್ ಅವರು ಜ.25 ರಂದು ಭಾರತಕ್ಕೆ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಅವರು 2023ರಲ್ಲಿ ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸ್ನೇಹದ ಸಂಕೇತವಾಗಿ, ಪರಸ್ಪರ ಸಹಕಾರ ತತ್ವದಡಿ ಮ್ಯಾಕ್ರನ್ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳುತ್ತಿದ್ದಾರೆ.
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ - ಬಾಂಧವ್ಯದ 25ನೇ ವರ್ಷಾಚರಣೆ ಸಮಯದಲ್ಲಿ ಫ್ರಾನ್ಸ್ ಅಧ್ಯಕ್ಷರು ಭಾರತ ಪ್ರವಾಸ ಭೇಟಿ ಎರಡು ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಕಾರ್ಯತಂತ್ರ ರೂಪಿಸುವ ಸಾಧ್ಯತೆಗಳಿವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಮೋದಿ ಹಾಗೂ ಮ್ಯಾಕ್ರನ್ ವಿಶ್ವದ ನಾನಾ ವೇದಿಕೆಗಳಲ್ಲಿ ಪರಸ್ಪರ ಆರು ಬಾರಿ ಭೇಟಿಯಾಗಿದ್ದಾರೆ. ಭಾರತ ಪ್ರವಾಸದ ವೇಳೆ ಉಭಯ ನಾಯಕರು ಏಳನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

•ದ್ವಿಪಕ್ಷೀಯ ಮಾತುಕತೆ:
 ಫ್ರಾನ್ಸ್ ಅಧ್ಯಕ್ಷರಾಗಿ ಭಾರತಕ್ಕೆ ಆಗಮಿಸುತ್ತಿರುವ ಮ್ಯಾಕ್ರನ್ ಅವರು ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯದ ಕುರಿತು ಮಾತುಕತೆ ನಡೆಸಲಿದ್ದಾರೆ. ರಕ್ಷಣೆ, ಆರ್ಥಿಕತೆ, ವ್ಯಾಪಾರ, ವಾಣಿಜ್ಯ, ಡಿಜಿಟಲ್ ತಂತ್ರಜ್ಞಾನ, ಶಿಕ್ಷಣ, ಪ್ರವಾಸೋದ್ಯಮ, ಹಸಿರು ಇಂಧನ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

Comments