ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಲೋಕಾರ್ಪಣೆ: ರಾಮಮಂದಿರ ಉದ್ಘಾಟನೆಯಂದು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಚಿವ ರಾಮಲಿಂಗಾರೆಡ್ಡಿ
ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮಮಂದಿರ ಉದ್ಘಾಟನೆ ಸಂದರ್ಭ ರಾಜ್ಯದ ನೂರಾರು ದೇವಾಲಯಗಳಲ್ಲಿಯೂ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಲಿವೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು
ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.
ಈ ಮಧ್ಯೆ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಮಮಂದಿರ ಉದ್ಘಾಟನೆಯ ಅಂಗವಾಗಿ ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಸೂಚಿಸಿದೆ.
ಬೆಂಗಳೂರಿನಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ರಾಮಲಿಂಗಾ ರೆಡ್ಡಿ, ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.
ಈ ಕುರಿತು ಆದೇಶ ಹೊರಡಿಸಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಪ್ರಾಣ ಪ್ರತಿಷ್ಠಾಪನಾ ಸಮಯವಾದ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ ನಡೆಸಿ ದೇಶ, ರಾಜ್ಯಕ್ಕೆ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ
ಅದೇ ಸಮಯಕ್ಕೆ ಸರಿಯಾಗಿ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನೇರವೇರಿಸುವ ಮೂಲಕ ವಿಶೇಷ ಗೌರವ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ .
ಜನವರಿ 22ರಂದು 51 ಇಂಚು ಎತ್ತರದ ರಾಮಲಲ್ಲಾ ವಿಗ್ರಹ ಸ್ಥಾಪನೆಯಾಗಲಿದೆ. ವಿಗ್ರಹಕ್ಕೆ ಜನವರಿ 16ರಿಂದ ಮಸ್ತಕಾಭಿಷೇಕ ಪ್ರಾರಂಭವಾಗಲಿದೆ. ಏಳು ದಿನಗಳ ಕಾಲ ಈ ಧಾರ್ಮಿಕ ಕೈಂಕರ್ಯ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
Comments
Post a Comment